ಬ್ರಹ್ಮಾವರ: ಬಾರ್ಕೂರಿನ ಒಂದೇ ಮನೆಯ ಇಬ್ಬರು ಮಕ್ಕಳು ಸಹಿತ ಐದು ಮಂದಿಯಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಕೋಡಿಬೆಂಗ್ರೆಯ ಕ್ಯಾನ್ಸರ್ ಪೀಡಿತ ವೃದ್ಧೆಯೊಬ್ಬರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಈ ವೇಳೆ ವೃದ್ಧೆಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ವೃದ್ಧೆ ಆಸ್ಪತ್ರೆಯಿಂದ ಬಿಡುಗಡೆಗೊಂಡ ನೇರವಾಗಿ ಬಾರಕೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಮನೆಗೆ ಬಂದ ಬಳಿಕ ವೃದ್ಧೆಗೆ ಕೊರೊನಾ ಪಾಸಿಟಿವ್ ಬಂದಿದೆ. ಇದೀಗ ಮನೆಯಲ್ಲಿರುವ ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೂಡ ಪರೀಕ್ಷೆಗೆ ಒಳಪಡಿಸಿದ್ದು, ಇಂದು ಅವರಿಗೂ ಕೊರೊನಾ ಪಾಸಿಟಿವ್ ಎಂಬುದಾಗಿ ವರದಿ ಬಂದಿದೆ.
ಇದೀಗ ಸೋಂಕಿತರ ಪ್ರಾಥಮಿಕ ಹಾಗೂ ಸೆಕೆಂಡರಿ ಸಂಪರ್ಕ ದ ಕಾರಣಕ್ಕಾಗಿ ಸೋಂಕಿತರ ಮನೆ ಸಹಿತ ಸುತ್ತಮುತ್ತಲಿನ 13 ಮನೆ ಹಾಗೂ 19 ಅಂಗಡಿಗಳನ್ನು ಇಂದು ಸೀಲ್ ಡೌನ್ ಮಾಡಲಾಗಿದೆ. ಹಾಗೆ ವೃದ್ಧೆಯ ಕೋಡಿಬೆಂಗ್ರೆಯ ಮನೆಯನ್ನು ಕೂಡ ಇಂದು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.