ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಇನ್ನು ಲಾಕ್ ಡೌನ್ ಮಾಡುವ ಪ್ರಶ್ನೆ ಇಲ್ಲ. ಜಿಲ್ಲಾಧಿಕಾರಿಗಳು ಇನ್ನು ಮುಂದೆ ಲಾಕ್ ಡೌನ್ ಬಗ್ಗೆ ಮಾತಾಡಬಾರದು. ಕಂಟೋನ್ಮೆಂಟ್ ಝೋನ್ಗಳಲ್ಲಿ ಮಾತ್ರ ಅತ್ಯಂತ ಕಠಿಣ ಕ್ರಮಗಳು ಜಾರಿಯಲ್ಲಿರುತ್ತವೆ. ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಿಸಲು ಸಹಾಯ ಮಾಡಿ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಜನತೆ ಎಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ಆರ್ಥಿಕವಾಗಿ ರಾಜ್ಯವನ್ನು ಪುನಶ್ಚೇತನಗೊಳಿಸಲು ಸಹಕರಿಸಬೇಕು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಸರ್ಕಾರಿ ಮತ್ತು ಖಾಸಗಿ ಸೇರಿ ಸುಮಾರು 11 ಸಾವಿರ ಬೆಡ್ಗಳು ಬೆಂಗಳೂರಿನಲ್ಲಿ ಲಭ್ಯವಿದೆ. ಸಚಿವರು, ಶಾಸಕರು ಅಧಿಕಾರಿಗಳು ಹಗಲಿರುಳೆನ್ನದೆ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ವೈದ್ಯರು, ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರ ಜೊತೆ ಸಂಪೂರ್ಣ ಸಹಕರಿಸಬೇಕು. ಕೋವಿಡ್ ರೋಗಿಗಳನ್ನು ಸಹಾನುಭೂತಿಯಿಂದ ನೋಡಬೇಕು ಎಂದರು.