ಮಧ್ಯಪ್ರದೇಶ: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಚೌಹಾಣ್ ಅವರು ಇಂದು ಸ್ವತಃ ಟ್ವೀಟರ್ ಮೂಲಕ ತನಗೆ ಸೋಂಕು ತಗುಲಿದೆ ಎಂದು ದೃಢಪಡಿಸಿದ್ದು, ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ. ನಾನು ಹೋಮ್ ಕ್ವಾರಂಟೈನ್ ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಿತರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಅವರು ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ. ಚೌಹಾಣ್ ದೇಶದಲ್ಲಿ ಕೊರೊನಾ ಕಾಣಿಸಿಕೊಂಡ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.