ಹರಿಯಾಣ: ಇಂದು ಮಧ್ಯಾಹ್ನ ಫ್ರಾನ್ಸ್ನಿಂದ ಹೊರಟಿರುವ ಮೊದಲ ಹಂತದ ಐದು ರಫೇಲ್ ಯುದ್ಧ ವಿಮಾನಗಳು ಅಂಬಾಲ ವಾಯುನೆಲೆಗೆ ಬಂದಿಳಿಯಲಿದೆ.
ಇದನ್ನು ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಆರ್ಕೆಎಸ್ ಭದೌರಿಯಾ ಬರಮಾಡಿಕೊಳ್ಳಲಿದ್ದಾರೆ.
ಹತ್ತಿರದ ನಾಲ್ಕು ಹಳ್ಳಿಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ವಾಯುನೆಲೆ ಸುತ್ತ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಹಾಗೂ ಯುದ್ಧ ವಿಮಾನಗಳು ಇಳಿಯುವ ದೃಶ್ಯ ಸೆರೆ ಹಿಡಿಯುವುದನ್ನು ನಿಷೇಧಿಸಲಾಗಿದೆ.












