ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 10 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಆ ಮೂಲಕ ಕೊರೊನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 169ಕ್ಕೆ ಏರಿಕೆಯಾಗಿದೆ.
ಇಂದು 167 ಮಂದಿಗೆ ಪಾಸಿಟಿವ್
ಇಂದು ಮಂಗಳೂರು ತಾಲೂಕಿನ 107 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಬೆಳ್ತಂಗಡಿಯ 19, ಬಂಟ್ವಾಳದ 13, ಪುತ್ತೂರಿನ 11 ಹಾಗೂ ಸುಳ್ಯ ತಾಲೂಕಿನ ಓರ್ವ ವ್ಯಕ್ತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಹೊರ ಜಿಲ್ಲೆಯಿಂದ ಬಂದ 9 ಮಂದಿಗೆ ಕೊರೋನಾ ಪಾಸಿಟಿವ್, ಹೊರ ರಾಜ್ಯದಿಂದ ಬಂದ ಮೂವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,015 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.












