ಉಡುಪಿ: ರಾಮಮಂದಿರ ಭೂಮಿಪೂಜೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಇಂದು ರಾತ್ರಿ 8 ಗಂಟೆಯಿಂದ ಆ. 6ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಮದ್ಯ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದು. ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಭೆ, ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಎಲ್ ಇಡಿ ಬಳಸಿ ಪ್ರದರ್ಶನ ನಡೆಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡುವುದಕ್ಕೂ ನಿರ್ಬಂಧ ಹೇರಲಾಗಿದೆ. ಅದೇ ರೀತಿ ಪಟಾಕಿ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.