ಪಟ್ಟಾಭಿರಾಮನಾಗಿ ಭಕ್ತರಿಗೆ ದರ್ಶನಕೊಟ್ಟ ಉಡುಪಿಯ ಕಡೆಗೋಲು ಕೃಷ್ಣ

ಉಡುಪಿ: ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸುತ್ತಿದ್ದಂತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಮಹಾಪೂಜೆ ನೆರವೇರಿಸಲಾಯಿತು. ಕಡೆಗೋಲು ಕೃಷ್ಣ ಪಟ್ಟಾಭಿರಾಮನಾಗಿ ಭಕ್ತರಿಗೆ ದರ್ಶನ ಕೊಟ್ಟಿದ್ದಾನೆ.
ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು ಕೃಷ್ಣದೇವರಿಗೆ ಪಟ್ಟಾಭಿರಾಮನ ಅಲಂಕಾರ ಮಾಡಿದ್ದರು. ಈ ಮೂಲಕ ಶ್ರೀಕೃಷ್ಣನಲ್ಲಿ ಶ್ರೀರಾಮನನ್ನು ಕಂಡುಕೊಳ್ಳಲಾಯಿತು.
ಪರ್ಯಾಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು ಪಟ್ಟಾಭಿರಾಮನಿಗೆ ಮಹಾಪೂಜೆಯನ್ನು ನೆರವೇರಿಸಿದರು.