ನವದೆಹಲಿ: ಕೃಷಿ ಕ್ಷೇತ್ರಕ್ಕೆ ಹಣಕಾಸು ನೆರವು ಒದಗಿಸುವ ನಿಟ್ಟಿನಲ್ಲಿ ಕೃಷಿ ಮೂಲಸೌಕರ್ಯ ನಿಧಿಯಡಿ 1 ಲಕ್ಷ ಕೋಟಿ ರೂಪಾಯಿಗಳ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಈ ಬಗ್ಗೆ ಭಾನುವಾರ ಟ್ವೀಟರ್ ನಲ್ಲಿ ಅವರು ಮಾಹಿತಿ ನೀಡಿದ್ದಾರೆ.
ಪಿಎಂ-ಕಿಸಾನ್ ಯೋಜನೆಯಡಿ 17,000 ಕೋಟಿ ರೂ. ನೆರವು ಯೋಜನೆಯ ಆರನೇ ಕಂತಿನ ಮೊತ್ತವನ್ನು ಬಿಡುಗಡೆ ಮಾಡಲಾಗುವುದು. ಇದರಿಂದ ಒಟ್ಟು 8.5 ಕೋಟಿ ರೈತರಿಗೆ ನೆರವಾಗಲಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಈ ಯೋಜನೆ ಕೃಷಿಕರಿಗೆ ಬಹಳ ನೆರವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.