ಉಡುಪಿ: ಜಿಲ್ಲೆಯಲ್ಲಿ ಇಂದು 90 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಮೂರು ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಂದಾಪುರ ತಾಲ್ಲೂಕಿನ 62 ವರ್ಷದ ಮಹಿಳೆ ಮತ್ತು 79 ವರ್ಷದ ವೃದ್ಧ ಹಾಗೂ ಉಡುಪಿ ತಾಲ್ಲೂಕಿನ 81 ವರ್ಷದ ವೃದ್ಧ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.