ಉಡುಪಿ: ಜಿಲ್ಲೆಯಲ್ಲಿ ಇಂದು 263 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6773 ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 116 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 82 ಮಂದಿ ಸಹಿತ 198 ಮಂದಿ ಕೊರೊನಾ ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 3966 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 2738 ಸಕ್ರಿಯ ಕೊರೊನಾ ಸೋಂಕಿತರಿದ್ದು, 1448 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1290 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
*ಮೂವರು ಕೊರೊನಾಗೆ ಬಲಿ*
ಇಂದು ಜಿಲ್ಲೆಯಲ್ಲಿ ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಡುಪಿ ತಾಲ್ಲೂಕಿನ 35 ವರ್ಷದ ಯುವಕ, 66 ವರ್ಷದ ವ್ಯಕ್ತಿ ಹಾಗೂ ಕಾರ್ಕಳ ತಾಲ್ಲೂಕಿನ 81 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.