ಉಡುಪಿ: ಜಿಲ್ಲೆಯಲ್ಲಿ ಇಂದು 402 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7175 ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 188 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 104 ಮಂದಿ ಸಹಿತ ಮಂದಿ ಕೊರೊನಾ 292 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 4258 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 2847 ಸಕ್ರಿಯ ಕೊರೊನಾ ಸೋಂಕಿತರಿದ್ದು, 1449 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1398 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಒಬ್ಬರು ಕೊರೊನಾಗೆ ಮೃತ್ಯು:
ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಡುಪಿ ತಾಲ್ಲೂಕಿನ 56 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.