ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಚೇತರಿಕೆ ಕಂಡುಬಂದಿಲ್ಲ. ಅವರಿಗೆ ವೆಂಟಿಲೇಟರ್ ನೆರವಿನಿಂದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯ ವೈದ್ಯರು ಶನಿವಾರ ತಿಳಿಸಿದ್ದಾರೆ.
ಪ್ರಣವ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಚಿಕಿತ್ಸೆ ಮುಂದುವರಿಸಲಾಗಿದೆ. ತಜ್ಞರ ತಂಡವು ನಿಯಮಿತವಾಗಿ ಅವರ ಮೇಲ್ವಿಚಾರಣೆ ನಡೆಸುತ್ತಿದೆ’ ಎಂದು ಆಸ್ಪತ್ರೆ ಪ್ರಕಟಣೆ ಹೊರಡಿಸಿದೆ.