ಹೆಬ್ರಿ: ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ (621) ಪಡೆದ ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿನಿಯಾಗಿ ಗಿಲ್ಲಾಳಿ ಸುಮೇದಾ ಆಚಾರ್ಯ ಅವರಿಗೆ ಬಿಜೆಪಿ ಯುವ ಮೋರ್ಚ ಹೆಬ್ರಿ ಶಕ್ತಿ ಕೇಂದ್ರದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯರಾದ ಗುರುದಾಸ ಶೆಣೈ, ಹೆಬ್ರಿ ತಾಲೂಕು ಪಂಚಾಯತ್ ನ ಅಧ್ಯಕ್ಷರಾದ ರಮೇಶ್ ಪೂಜಾರಿ, ಹೆಬ್ರಿ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾದ ಸುಧಾಕರ್ ಹೆಗ್ಡೆ, ಹೆಬ್ರಿ ಪಂಚಾಯತ್ ಅಧ್ಯಕ್ಷರಾದ ಎಚ್. ಕೆ. ಸುಧಾಕರ್, ಕಾರ್ಕಳ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಸುಹಾಸ್ ಶೆಟ್ಟಿ, ಯುವ ಮೋರ್ಚಾ ಹೆಬ್ರಿ ಶಕ್ತಿಕೇಂದ್ರದ ಅಧ್ಯಕ್ಷರಾದ ಸುರೇಂದ್ರ ಕುಲಾಲ್, ಯುವ ಮೋರ್ಚಾ ಹೆಬ್ರಿ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಸಂದೇಶ್ ಆಚಾರ್ಯ ಹಾಗೂ ನಾಗೇಂದ್ರ ನಾಯಕ್, ಶಿವಪುರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ರಾದ ಜಿತೇಶ್ ಶೆಟ್ಟಿ, ಹೆಬ್ರಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ತಾರನಾಥ ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು