ಬ್ಯಾಂಕ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ‌ತರಬೇತಿ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನವರು 90 ಸಾವಿರ ಅಧಿಕಾರಿ ಮತ್ತು ಗುಮಾಸ್ತ ಹುದ್ದೆಗಳಿಗೆ ನೇಮಕ ಮಾಡಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನದ ತರಬೇತಿಯನ್ನು ಆನ್‌ಲೈನ್‌ನಲ್ಲಿ ಆಯೋಜಿಸಲಾಗಿದೆ.

ಆಸಕ್ತರು ಆಗಸ್ಟ್ 25 ರೊಳಗೆ ಬೆಳ್ಳಿಗೆ 10 ಗಂಟೆಯಿAದ ಸಂಜೆ 4 ವರೆಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.