ಉಡುಪಿ: ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 154 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 155 ಮಂದಿ ಸಹಿತ 309 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7401 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ 117 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10133 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇನ್ನೂ 2648 ಸಕ್ರಿಯ ಕೊರೊನಾ ಸೋಂಕಿತರಿದ್ದು, 1065 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1583 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕೊರೊನಾಗೆ ಇಬ್ಬರು ಬಲಿ:
ಜಿಲ್ಲೆಯಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಉಡುಪಿ ತಾಲ್ಲೂಕಿನ 42 ವರ್ಷದ ವ್ಯಕ್ತಿ ಹಾಗೂ ಕಾರ್ಕಳ ತಾಲ್ಲೂಕಿನ 73 ವರ್ಷದ ವೃದ್ಧ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 84ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.