ಉಡುಪಿ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಾಳೆ (ಆ.26)ರಂದು ಮಧ್ಯಾಹ್ನ 3 ಗಂಟೆಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನ ನಡೆಯಲಿದೆ.
ಭಾರತೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾ ಬಾಲಕೃಷ್ಣ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪರಾಜ್ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಮುಖಂಡರು ಸಭೆಯಲ್ಲಿ ಭಾಗವಹಿಸುವರು ಎಂದು ಯುವ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ. ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.