ಉಡುಪಿ: ರಾಜಕೀಯ ಪಕ್ಷವೊಂದರ ವಿರುದ್ಧ ಜಿಲ್ಲಾಧಿಕಾರಿ ಹೇಳಿಕೆ ನೀಡಿದ್ದಾರೆಂದು ಖಾಸಗಿ ವೆಬ್ ಸೈಟ್ ಸುದ್ದಿ ಪ್ರಕಟಿಸಿರುವ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದ್ದಾರೆ.