ಉಡುಪಿ: ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮೇಜರ್ ಧ್ಯಾನ್ ಚಂದ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಮಾತನಾಡಿ, ಪ್ರಶಾಂತ ಮನಸ್ಥಿತಿ, ಸದೃಢ ಆರೋಗ್ಯಕ್ಕೆ ಯೋಗ ಮತ್ತು ಕ್ರೀಡೆ ಮಹತ್ವವಾಗಿದೆ ಎಂದರು.
ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್. ಹಾಗೂ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.