ಹಿರಿಯಡ್ಕ: ಕೋಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್ (ರಿ.) ಹಿರಿಯಡ್ಕ ಇದರ 27ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜ.26 ರoದು ಕೋಟ್ನಕಟ್ಟೆ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ಬೆಳಗ್ಗೆ 7.30 ಕ್ಕೆ ಉದ್ಯಮಿ ಬಿ.ರೋಹಿದಾಸ ಪೈ ಇವರಿಂದ ಧ್ವಜಾರೋಹಣ, ಸಂಜೆ 6:30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 7:30ಕ್ಕೆ ಸಭಾಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸಾಧನಾಶೀಲ ಕೃಷಿಕ ಪ್ರಶಸ್ತಿ ಪುರಸ್ಕೃತ ಕುದಿ ಶ್ರೀನಿವಾಸ್ ಭಟ್ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಕಾರ್ಕಳದ ವಾಗ್ಮಿ ಶ್ರೀಕಾಂತ್ ಶೆಟ್ಟಿ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ನೃತ್ಯ ವೈವಿಧ್ಯ ಹಾಗೂ ಕಟೀಲ್ದಪ್ಪೆ ಉಳ್ಳಾಲ್ದಿ ತುಳು ಪೌರಾಣಿಕ ನಾಟಕ ನಡೆಯಲಿದೆ.