ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 7 ರಿಂದ 19ರ ವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಉಚಿತ ಬಸ್ ಸೌಲಭ್ಯ ಕಲ್ಪಿಸಿದೆ.
ವಿದ್ಯಾರ್ಥಿಗಳು ತಮ್ಮ ಊರುಗಳಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಸ್ನಲ್ಲಿ ಪ್ರವೇಶ ಪತ್ರವನ್ನು ತೊರಿಸಬೇಕು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.