ಉಡುಪಿ: ಮಾದಕ ವಸ್ತುಗಳ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಅವರ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಇಂದು ಮನವಿ ಸಲ್ಲಿಸಲಿಸಿತು.
ಮಾದಕ ವಸ್ತುಗಳ ಮಾರಾಟ, ಬಳಕೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಮೂಲಕ ಉಡುಪಿಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎಂದು ನಿಯೋಗವು ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಕ್ಷಿತ್ ಶೆಟ್ಟಿ ಹೆರ್ಗ, ಶರತ್ ಶೆಟ್ಟಿ ಉಪ್ಪುಂದ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ ಕಾಪು, ಸುಮಿತ್ ಮಡಿವಾಳ ಕಾರ್ಕಳ, ಅವಿನಾಶ್ ಕಾರ್ಕಳ, ಅಭಿರಾಜ್ ಸುವರ್ಣ, ಅನುರ್ ಮೆಂಡನ್, ಕೋಶಾಧಿಕಾರಿ ಮಟ್ಟು ಯತೀಶ್ ಕೋಟ್ಯಾನ್, ಜಿಲ್ಲಾ ಹಾಗೂ ಮಂಡಲ ಯುವಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.