ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿ ಆರೋಪದಡಿ ಬಂಧಿಸಲಾಗಿರುವ ನಟಿ ರಾಗಿಣಿ ದ್ವಿವೇದಿ ಸಹಿತ ಐವರು ಆರೋಪಿಗಳಿಗೆ ನಗರದ 1ನೇ ಎಸಿಎಂಎಂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ನಡಿ ಸಂಜನಾಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಡ್ರಗ್ಸ್ ಪ್ರಕರಣ ಸಂಬಂಧ ಆರೋಪಿಗಳನ್ನು ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದಿದ್ದರು. ಅದರ ಅವಧಿ ಅಂತ್ಯಗೊಂಡಿದ್ದರಿಂದ ಇಂದು ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.
ಆರೋಪಿಗಳಾದ ರಾಗಿಣಿ, ಪ್ರಶಾಂತ್ ರಂಕಾ, ಸಿಮೋನ್, ರಾಹುಲ್ ಹಾಗೂ ನಿಯಾಜ್ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ಬಳಿಕ ಆರೋಪಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ನಟಿ ಸಂಜನಾ ಅವರನ್ನು ಸೆ.16ರ ವರೆಗೆ (ಎರಡು ದಿನ) ಪೊಲೀಸರಿಗೆ ಒಪ್ಪಿಸಿ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಈಕೆಯೊಂದಿಗೆ ವಿರೇನ್ ಖನ್ನಾ, ರವಿಶಂಕರ್ ಎಂಬುವವರನ್ನು ಎರಡು ದಿನ ಪೊಲೀಸ್ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.