ನವದೆಹಲಿ: ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್(88) ಅವರು ಮಂಗಳವಾರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದ ಕಾರಣ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ದುಃಖ ವ್ಯಕ್ತಪಡಿಸುತ್ತಿದ್ದಾರೆ.
ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಇವರು ತಮ್ಮ ಸಾಮಾಜಿಕ ಕೆಲಸಗಳಿಂದಲೇ ಒರ್ವ ಜನನಾಯಕನಾಗಿ ಗುರುತಿಸಿಕೊಂಡಿದ್ದರು.
1970ರ ಸಮಾಜವಾದದ ಹೋರಾಟದಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ಫರ್ನಾಂಡಿಸ್, ಜನತಾ ದಳದ ಮುಖಂಡರಾಗಿ ಸಮತಾ ಪಕ್ಷ ಕಟ್ಟಿದ್ದರು. ಆಗಸ್ಟ್ 2009 ರಿಂದ ಜುಲೈ 2010 ರವರೆಗೆ ರಾಜ್ಯಸಭಾ ಸದಸ್ಯರಾಗಿ, ಕೊನೆಯದಾಗಿ ಸಂಸತ್ತಿನಲ್ಲಿ ಕಾಣಿಸಿಕೊಂಡಿದ್ದರು.