ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಹುಟ್ಟುಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಮಂಡಲ ಯುವ ಮೋರ್ಚಾ ವತಿಯಿಂದ ಗುರುವಾರ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಜಿಲ್ಲೆಯಾದ್ಯಂತ ಯುವ ಮೋರ್ಚಾ ಕಾರ್ಯಕರ್ತರು ಸಕ್ರಿಯವಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ 523 ಯೂನಿಟ್ ರಕ್ತ ಸಂಗ್ರಹಿಸುವ ಮೂಲಕ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಕಾರ್ಕಳ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಶ್ವೇತಾ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಕ್ಷಿತ್ ಶೆಟ್ಟಿ ಹೆರ್ಗ, ಶರತ್ ಶೆಟ್ಟಿ ಉಪ್ಪುಂದ, ವಿವಿಧ ಮಂಡಲಗಳ ಯುವ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.












