ಬೆಂಗಳೂರು: ಕೊರೊನಾ ಕಡಿಮೆಯಾಗದ ಕಾರಣ ಸೆಪ್ಟೆಂಬರ್ 30 ರ ವರೆಗೂ ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಸೆ. 21ರಿಂದ ಕೆಲ ನಿಬಂಧನೆಗಳೊಂದಿಗೆ ಶಾಲಾ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಆದರೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿದ್ದು, ನಿಯಂತ್ರಣಕ್ಕೆ ಬರುವವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿ ಮಾಹಿತಿ ನೀಡಿದ್ದಾರೆ.
ಸೆ. 30ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.