ಮಹಾರಾಷ್ಟ್ರ: ಮಹಾರಾಷ್ಟ್ರ ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಥಾಣೆ ಜಿಲ್ಲೆಯಲ್ಲಿನ 3 ಅಂತಸ್ತಿನ ಕಟ್ಟಡ ಕುಸಿದು ಪರಿಣಾಮ 8 ಮಂದಿ ಮೃತಪಟ್ಟ ಧಾರುಣ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ನಸುಕಿನ ವೇಳೆ ಸುಮಾರು 3.40ರ ವೇಳೆಗೆ ಕಟ್ಟಡ ಕುಸಿದಿದ್ದು, ಸ್ಥಳೀಯರು 20 ಮಂದಿಯನ್ನು ರಕ್ಷಿಸಿದ್ದಾರೆ. ಸದ್ಯ ಎನ್ ಡಿ ಆರ್ ಎಫ್ ತಂಡ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, 5 ಮಂದಿಯನ್ನು ರಕ್ಷಣೆ ಮಾಡಲಾಗಿದೆ.
ಇನ್ನೂ 20 ರಿಂದ 25 ಮಂದಿ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಅವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಎನ್ ಡಿ ಆರ್ ಎಫ್ ತಿಳಿಸಿದೆ.