ನವದೆಹಲಿ: ರಾಜ್ಯಸಭೆಯಲ್ಲಿ ಅನುಮೋದನೆಗೊಂಡಿರುವ ಕೃಷಿ ಮಸೂದೆಗಳು ರೈತ ವಿರೋಧಿಯಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನೂತನ ಕೃಷಿ ಮಸೂದೆಗಳು ಇಂದಿನ ಕಾಲಕ್ಕೆ ಪ್ರಸ್ತುತವಾಗಿದ್ದು, ಇದರಿಂದ ರೈತರಿಗೆ ಉತ್ತಮ ಅನುಕೂಲವಿದೆ. ಆದರೆ ಈ ಮಸೂದೆಗಳ ಬಗ್ಗೆ ವಿರೋಧಪಕ್ಷಗಳು ಅಪಪ್ರಚಾರ ನಡೆಸುತ್ತಿವೆ ಎಂದು ಅವರು ಇಂದು ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ, ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ ಮುಂದುವರಿಯುತ್ತದೆ ಎಂಬುದಾಗಿ ರೈತರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದರು.