ಬೈಂದೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಉಚಿತ ನೇತ್ರ ತಪಾಸಣೆ ಶಿಬಿರ

ಬೈಂದೂರು: ಬಿಜೆಪಿ ಬೈಂದೂರು ಮಂಡಲ ಮತ್ತು ಮಹಿಳಾ ಮೋರ್ಚಾದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆ ಅಂಗವಾಗಿ ಉಚಿತ ನೇತ್ರ ತಪಾಸಣೆ, ಪೊರೆ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರವು ಈಚೆಗೆ ಮಹಾಲಸ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆಯಿತು.

ಶಿಬಿರದಲ್ಲಿ 410 ಜನರಿಗೆ ತಪಾಸಣೆ ಮಾಡಲಾಯಿತು. ಅದರಲ್ಲಿ 205 ಜನರಿಗೆ ಉಚಿತ ಕನ್ನಡಕ ಹಾಗೂ ಶಸ್ತ್ರ ಚಿಕಿತ್ಸೆಗೆ 70 ಜನರನ್ನು ನೋಂದಣಿ ಮಾಡಲಾಯಿತು.

ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಪ್ರಸಾದ್ ನೇತ್ರಾಲಯದ ನಿರ್ದೇಶಕ ಡಾ. ಕೃಷ್ಣ ಪ್ರಸಾದ್, ಮಹಿಳಾ ಮೋರ್ಚಾ ಉಸ್ತುವಾರಿ ಗೀತಾಂಜಲಿ ಸುವರ್ಣ, ಜಿಲ್ಲಾ ಪಂಚಾಯತ್ ಸದಸ್ಯರಾದ ಶೋಭಾ ಪುತ್ರನ್, ಬಾಬು ಶೆಟ್ಟಿ, ಸುರೇಶ್ ಬಟ್ವಾಡಿ, ತಾಲ್ಲೂಕು ಪಂಚಾಯತ್ ಸದಸ್ಯೆ ಶ್ಯಾಮಲಾ ಕುಂದರ್, ಮಂಡಲ ಕಾರ್ಯದರ್ಶಿ ಕಿಶೋರ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಹಾಗೂ ಬೈಂದೂರು ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಖಾರ್ವಿ ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ ಪ್ರಾಸ್ತಾವಿಕವಾಗಿ ಮಾಡಿದರು. ಪ್ರಕಾಶ್ ಪೂಜಾರಿ ವಂದಿಸಿದರು.