ಮಂಗಳೂರು: ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೋರಿ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಅನುಶ್ರೀ ಅವರಿಗೆ ಪೊಲೀಸರು ವಾಟ್ಸಾಪ್ನಲ್ಲಿ ನೋಟಿಸ್ ನೀಡಿದ್ದಾರೆ. ಡ್ರಗ್ಸ್ ಸೇವನೆ, ಬಳಕೆ ಆರೋಪದಡಿ ಇತ್ತೀಚೆಗೆ ಸಿಸಿಬಿ ಪೊಲೀಸರಿಂದ ಬಂಧನಕೊಳ್ಳಗಾದ ಡ್ಯಾನ್ಸರ್ ಕಿಶೋರ್ ಶೆಟ್ಟಿ ಜತೆ ಸಂಪರ್ಕ ಇರುವ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ಅಲ್ಲದೆ, ಕಿಶೋರ್ ಶೆಟ್ಟಿ ತನಗೆ ಅನುಶ್ರಿ ಪರಿಚಯ ಇರುವ ಬಗ್ಗೆ ಹಾಗೂ ಆಕೆ ಮಂಗಳೂರಿನಲ್ಲಿ ನಡೆದ ಹಲವು ಡ್ರಗ್ಸ್ ಪಾರ್ಟಿಗಳಲ್ಲಿ ಭಾಗಿಯಾಗಿದ್ದಾಳೆ ಎಂದು ಸ್ಫೋಟಕ ಮಾಹಿತಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ಈ ಆಧಾರದಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ಅನುಶ್ರೀ ಅವರಿಗೆ ನೋಟಿಸ್ ನೀಡಲು ಸಿಸಿಬಿ ತಂಡ ಬೆಂಗಳೂರಿಗೆ ಹೊರಟಿದೆ ಎಂದು ಹೇಳಲಾಗುತ್ತಿದೆ..