ಎಸ್ಪಿ ಕಚೇರಿಯಲ್ಲೇ ಹೆಣ್ಣು ಮಗುವಿಗೆ ಜನ್ಮ ಕೊಟ್ಟ ಅಪ್ರಾಪ್ತ ಬಾಲಕಿ

ಪಾಟ್ನಾ: ಅಪ್ರಾಪ್ತ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬಿಹಾರ ಪಾಟ್ನಾದ ಕಿಶಾನ್ ಗಂಜ್ ಎಸ್ ಪಿ ಕಚೇರಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಈಕೆಗೆ ನಿರಂತರ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಬಾಲಕಿ ನ್ಯಾಯ ಕೇಳಲು ಎಸ್ಪಿ ಕಚೇರಿಗೆ ಹೋದದಂತಹ ಸಂದರ್ಭದಲ್ಲಿ ಅಲ್ಲಿಯೇ ಆಕೆಗೆ ಹೆರಿಗೆ ಆಗಿದೆ ಎಂದು ತಿಳಿದುಬಂದಿದೆ.

ಪಹಾದಕಟ್ಟಾ ಪೊಲೀಸ್ ಠಾಣೆ ವ್ಯಾಪ್ತಿಯ ನೆರೆಯ ಹಳ್ಳಿಯ ಮುನ್ನಾ ಕುಮಾರ್ ಎಂಬ ಯುವಕ, ಪ್ರೀತಿಯ ನೆಪದಲ್ಲಿ ಈಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಆಕೆ ಗರ್ಭೀಣಿ  ಅಂತಾ ತಿಳಿದಾಗ ಮದುವೆಯಾಗಲು ನಿರಾಕರಿಸಿದ್ದಾನೆ ಎನ್ನಲಾಗಿದೆ.

ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ಆರೋಪಿಯ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಸದ್ಯ ತಾಯಿ ಮತ್ತು ಮಗು ಆರೋಗ್ಯದಿಂದ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ.