ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿಯ 13.37 ಎಕರೆ ಪ್ರದೇಶ ಹಿಂದೂಗಳಿಗೆ ಸೇರಿದ್ದು, ಇಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದಾರೆ. ಅಲ್ಲದೆ, ಈ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.
ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ. 1968ರ ರಾಜಿ ಪತ್ರವನ್ನು ಒಪ್ಪಲಾಗದು. ಕೃಷ್ಣ ಜನ್ಮಭೂಮಿಯಿಂದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಮಥುರಾದಲ್ಲಿನ ಕೃಷ್ಣ ದೇಗುಲವನ್ನು ಮುಘಲ್ ದೊರೆ ಔರಂಗಜೇಬ್ ಧ್ವಂಸಗೊಳಿಸಿದ್ದಾನೆ. ಈ ಬಗ್ಗೆ ಇತಿಹಾಸದಲ್ಲಿ ಉಲ್ಲೇಖವಿದೆ. ಕೃಷ್ಣ ಜನ್ಮಭೂಮಿಯಲ್ಲಿದ್ದ ದೇಗುಲವೂ ಸೇರಿದಂತೆ ಅನೇಕ ಹಿಂದೂ ದೇಗುಲಗಳನ್ನು ಔರಂಗಜೇಬ್ ಧ್ವಂಸಗೊಳಿಸಿದ್ದನು ಎಂದೂ ಅವರು ಕೋರ್ಟ್ ಗೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.