ಬೆಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಕ್ಟೋಬರ್ 15ರ ವರೆಗೆ ಶಾಲಾ-ಕಾಲೇಜು ಮತ್ತೆ ಬಂದ್ ಆಗಲಿದೆ. ವಿದ್ಯಾರ್ಥಿಗಳಿಗೆ ಸಂದೇಹ ನಿವಾರಿಸಿಕೊಳ್ಳಲು ನೀಡಲಾಗಿದ್ದ ಅನುಮತಿಗೆ ತಡೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಹಿಂದೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ 9 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಅಕ್ಟೋಬರ್ 15ರ ವರೆಗೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಭೇಟಿ ಕೊಡುವುದನ್ನು ನಿರ್ಬಂಧಿಸಲಾಗಿದೆ.