ಮುಂಬೈ: ಬಾಲಿವುಡ್ ನ ಖ್ಯಾತ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ಅಂಗಾಂಗ ದಾನ ಮಾಡುವುದಾಗಿ ಸೋಶಿಯಲ್ ಮೀಡಿಯಾ ಮೂಲಕ ಘೋಷಣೆ ಮಾಡಿದ್ದಾರೆ.
ಅಂಗಾಂಗ ದಾನ ಮಾಡುವ ವಿಚಾರವನ್ನು ಹೇಳಲು ನನಗೆ ಹೆಮ್ಮೆ ಆಗುತ್ತದೆ. ಈ ಮೂಲಕ ಅಂಗಾಗ ದಾನದ ಪ್ರತಿಜ್ಞೆ ಮಾಡುತ್ತಿದ್ದೇನೆ ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ. ಹಸಿರು ರಿಬ್ಬನ್ ತೊಟ್ಟು ವಿಚಾರವನ್ನು ಜಗತ್ತಿಗೆ ಸಾರಿದ್ದಾರೆ.
ಬಿಗ್ ಬಿಯ ಈ ನಿರ್ಧಾರಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಗಳ ಮಹಾಪೂರ ಹರಿದು ಬಂದಿದೆ.
ಕೊರೊನಾ ಸೋಂಕಿಗೆ ಒಳಗಾಗಿದ್ದ ಬಚ್ಚನ್ ಅವರು, ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು. ಇದೀಗ ಕೌನ್ ಬನೇಗಾ ಕರೋಡ್ ಪತಿ ಎಂಬ ಕಿರುತೆರೆಯ ರಿಯಾಲಿಟಿ ಶೋ ಮೂಲಕ ಮತ್ತೆ ಮನೆ ಮನೆಗೆ ಪ್ರವೇಶ ಮಾಡಲಿದ್ದಾರೆ.