ಕಾರ್ಕಳ: ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚೈನ್ ಅನ್ನು ಕಸಿದುಕೊಂಡು ಪರಾರಿಯಾದ ಘಟನೆ ಕಾರ್ಕಳ ಎರ್ಲಪಾಡಿ ಗ್ರಾಮದ ಬುಕ್ಕಿಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಬುಕ್ಕಿಗುಡ್ಡೆ ನಿವಾಸಿ ಕಮಲಾ (75) ಚೈನ್ ಕಳೆದುಕೊಂಡವರು. ಇವರು ಶಿವನೆಟ್ಟು ಮಣ್ಣು ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಸುಲಿಗೆಕೋರರು ಕುತ್ತಿಗೆಯಲ್ಲಿದ್ದ ಸುಮಾರು 16 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಸುಲಿಗೆಕೋರರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.