ನವದೆಹಲಿ: ಕೇಂದ್ರ ಸರ್ಕಾರವು ಹೊರಡಿಸಿದ ಅನ್ಲಾಕ್ 5.0ನಲ್ಲಿ ಅಕ್ಟೋಬರ್ 15ರ ನಂತರ ಶಾಲೆಗಳನ್ನು ಮತ್ತೆ ತೆರೆಯಲು ಅನುಮತಿ ನೀಡಿದ್ದು, ಅದರಂತೆ ಕೇಂದ್ರ ಶಿಕ್ಷಣ ಸಚಿವಾಲಯ ಇಂದು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಮಾರ್ಗಸೂಚಿಗಳ ಪ್ರಕಾರ ಅಕ್ಟೋಬರ್ 15ರ ನಂತರ ಶಾಲೆಗಳು ಮತ್ತು ತರಬೇತಿ ಸಂಸ್ಥೆಗಳು ಶ್ರೇಣೀಕೃತ ರೀತಿಯಲ್ಲಿ ತೆರೆಯಬಹುದು. ಆದರೆ, ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರ್ಧಾರ ಕೈಗೊಳ್ಳಬಹುದಾಗಿದೆ.
ಸ್ಥಳೀಯ ಸಂದರ್ಭ ಮತ್ತು ಅಗತ್ಯಗಳಿಗೆ ಅನುಗುಣವಾಗಿ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್ಒಪಿ) ಅಳವಡಿಸಿಕೊಳ್ಳಬಹುದು ಅಥವಾ ಹೊಂದಿಸಿಕೊಳ್ಳಬಹುದೆಂದು ಸಚಿವಾಲಯ ತಿಳಿಸಿದೆ.