ಸಾಣೂರು: ಸಾಣೂರು ಯುವಕ ಮಂಡಲದ ಆಶ್ರಯದಲ್ಲಿ ಫಿಟ್ ಇಂಡಿಯಾ ಸರಣಿ ಕಾರ್ಯಕ್ರಮದ ಸಮಾರೋಪ ಮತ್ತು ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ ಅಕ್ಟೋಬರ್ 11 ಬೆಳಿಗ್ಗೆ 9.30ಕ್ಕೆ ಸಾಣೂರು ಯುವಕ ಮಂಡಲದ ಮೈದಾನದಲ್ಲಿ ನಡೆಯಲಿದೆ.
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಪಂದ್ಯಾಟಕ್ಕೆ ಚಾಲನೆ ನೀಡುವರು. ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ನೆಹರುಯುವ ಕೇಂದ್ರದ ಉಡುಪಿ ಜಿಲ್ಲಾ ಯುವ ಸಮನ್ವಯಾಧಿಕಾರಿ ವಿಲ್ಫ್ರೆಡ್ ಡಿ. ಸೋಜಾ, ತಾಲೂಕು ಪಂಚಾಯತ್ ಸದಸ್ಯ ಪ್ರವೀಣ್ ಕೋಟ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕಾರ್ಯದರ್ಶಿ ಮೋಹನ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ