ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆ ಸಮೀಪದಲ್ಲಿ ಇರುವ ವಸತಿ ಸಮುಚ್ಚಯವೊಂದರ 11ನೇ ಮಹಡಿಯ ಮೇಲಿಂದ ಜಿಗಿದು ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೊಡಂಕೂರು ನಿವಾಸಿ ಪಿ. ನಾರಾಯಣ ಪೂಜಾರಿ (80 ) ಎಂದು ತಿಳಿದುಬಂದಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಶವಗಾರಕ್ಕೆ ಸಾಗಿಸಲು ಉಚಿತ ಅಂಬುಲೇನ್ಸ್ ಸೇವೆಯನ್ನು ನೀಡಿ ಇಲಾಖೆಗೆ ಸಹಕರಿಸಿದ್ದಾರೆ.