ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳದ ನಾಗರಬಾವಿ ರಸ್ತೆಯ ನಿವಾಸಿ ಅನಂತಪದ್ಮನಾಭ ಜೋಯಿಷ್ ಎಂಬುವವರ ಪತ್ನಿ ಲಲಿತಾ (56) ಆತ್ಮಹತ್ಯೆಗೆ ಶರಣಾದ ಮಹಿಳೆ.
ಲಲಿತಾ ಅವರು ಕಳೆದ ಮೂರು ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಔಷಧ ಮಾಡಿದರೂ ಗುಣಮುಖರಾಗದಿದ್ದಾಗ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯಲ್ಲಿ ಪ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.