ಕಾರ್ಕಳ: ಮೈಗೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಕಾರ್ಕಳದ ಸುಲೋಚನ ನಾಯ್ಕ್ (78) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರು ಇಂದು ಬೆಳಿಗ್ಗೆ 6.30ರಿಂದ 7ಗಂಟೆಯ ಅವಧಿಯಲ್ಲಿ ಮನೆಯ ಹಿಂಬದಿಯ ತೋಟದಲ್ಲಿ ಮೈಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೃತ ಮಹಿಳೆಯ ಮಗಳು ಹೇಮಲತಾ ನಾಯ್ಕ್ ಅವರು ತಾಯಿಯ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.