ಉಡುಪಿ: ರಸ್ತೆಯ ಬದಿಯಲ್ಲಿ ನಿಲುಗಡೆಯಾಗಿದ್ದ ಕಾರಿಗೆ ಆಟೊ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡಿಬೈಲು ರಸ್ತೆಯಲ್ಲಿ ಸಂಭವಿಸಿದೆ.
ಮೂಡುಬೆಟ್ಟು ನಿವಾಸಿ ಸುನಿಲ್ (44) ಮೃತ ರಿಕ್ಷಾ ಚಾಲಕ. ರಿಕ್ಷಾ ಚಾಲಕ ಸುನಿಲ್ ಅಂಬಾಗಿಲಿನಿಂದ ಉಡುಪಿ ಕಡೆಗೆ ಬಾಡಿಗೆಗೆ ಬರುತ್ತಿದ್ದು, ಗುಂಡಿಬೈಲಿನ ನಾಗನಕಟ್ಟೆ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ರಿಕ್ಷಾ ಡಿಕ್ಕಿ ಹೊಡೆದಿದೆ.
ಇದರಿಂದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರು ಆತನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಪರೀಕ್ಷೆ ನಡೆಸಿದ ವೈದ್ಯರು ಸುನಿಲ್ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.