ಬಂಟ್ವಾಳ: ಇಲ್ಲಿನ ಮೆಲ್ಕಾರ್ ಸಮೀಪದ ಗುಡ್ಡೆಯಂಗಡಿಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಕೊಲೆಯಾದ ಯುವಕನನ್ನು ಕಲ್ಕಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಇಂದು ಸಂಜೆ ಕಾರಲ್ಲಿ ಬಂದ ಹಂತಕರ ತಂಡವು ಲಾಂಗ್ ನಿಂದ ಫಾರೂಕ್ ಗೆ ಹಲ್ಲೆ ನಡೆಸಿದ್ದು, ಇದರಿಂದ ಫಾರೂಕ್ ತೀವ್ರವಾಗಿ ಗಾಯಗೊಂಡು ಕುಸಿದು ಬಿದ್ದಿದ್ದಾನೆ.
ಸ್ಥಳೀಯರು ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಫಾರೂಕ್ ಬದುಕುಳಿಯಲಿಲ್ಲ. ಈತನ ಕೂಡ ರೌಡಿಶೀಟರ್ ಆಗಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗಿದ್ದ ಸ್ನೇಹಿತರೇ ಈ ಕೃತ್ಯ ಎಸಗಿದ್ದಾರೆ ಎಂದು ಸಂಶಯ ವ್ಯಕ್ತವಾಗಿದೆ. ಬಂಟ್ವಾಳ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.