ಕುಂದಾಪುರ: ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನು ಮುಂದೆ ಜನರಿಗೆ ಲಭ್ಯವಾಗಲಿದೆ. ಈ ಭಾಗದ ಜನರ ಬಹುವರ್ಷಗಳ ಕನಸು ಇಂದು ನನಸಾಗಿದೆ. ಸುಸಜ್ಜಿತವಾದ ಆರೋಗ್ಯ ಕೇಂದ್ರವನ್ನು ಇಲ್ಲಿನ ಜನರು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಹೇಳಿದರು.
ಅವರು ಸೋಮವಾರ ಹಟ್ಟಿಯಂಗಡಿ ಕ್ರಾಸ್ ಬಳಿ ನೂತನವಾಗಿ ನಿರ್ಮಿಸಿರುವ ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
. ಪಟ್ಟಣದಲ್ಲಿ ಕಾರ್ಯ ನಿರ್ವಹಿಸುವ ವೈದ್ಯರ ಸಂಖ್ಯೆ ಅಧಿಕವಿದೆ. ಆದರೆ ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡಲು ಹಳ್ಳಿಗಾಡಿಗೆ ಆಗಮಿಸಿ ಸೇವೆ ಸಲ್ಲಿಸುವ ವೈದ್ಯರ ಸಂಖ್ಯೆ ಅತೀ ವಿರಳ. ಪಟ್ಟಣದಿಂದ ಗ್ರಾಮೀಣ ಭಾಗಕ್ಕೆ ಬಂದು ಜನರ ಸೇವೆ ಮಾಡುವ ವೈದ್ಯರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷೆ ವಹಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಮ್ ಸುಕುಮಾರ ಶೆಟ್ಟಿ, ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಜ್ಯೋತಿ ಎಮ್, ಶಂಕರ್ ಪೂಜಾರಿ, ಬಾಬು ಹೆಗ್ಡೆ, ತಾ.ಪಂ ಸದಸ್ಯ ಕರುಣ್ ಪೂಜಾರಿ, ಹಟ್ಟಿಯಂಗಡಿ ದೇವಸ್ಥಾನದ ಪ್ರಧಾನ ಅರ್ಚಕ ಬಾಲಚಂದ್ರ ಭಟ್, ಹಟ್ಟಿಯಂಗಡಿ ಗ್ರಾ.ಪಂ ಅಧ್ಯಕ್ಷ ರಾಜು ಶೆಟ್ಟಿ, ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ್ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ರೋಹಿಣಿ ಸ್ವಾಗತಿಸಿದರು. ಡಾ. ರಂಗನಾಥ್ ಪ್ರಸ್ತಾಪಿಸಿ ಧನ್ಯವಾದವಿತ್ತರು, ರಮೇಶ್ ಗುಲ್ವಾಡಿ ಕಾರ್ಯಕ್ರಮ ನಿರೂಪಿಸಿದರು.