ಉಡುಪಿ: ನ. 8ರಂದು ಮಲಬಾರ್ ವಿಶ್ವರಂಗ ಪುರಸ್ಕಾರ ಸಮಾರಂಭ

ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರ ಜಂಟಿ ಆಶ್ರಯದಲ್ಲಿ ‘ಮಲಬಾರ್ ವಿಶ್ವರಂಗ ಪುರಸ್ಕಾರ -2020’ ಸಮಾರಂಭ ಇದೇ ನವೆಂಬರ್ 8ರಂದು ಸಂಜೆ 5 ಗಂಟೆಗೆ ಉಡುಪಿಯ ಗೀತಾಂಜಲಿ ಬಳಿ ಇರುವ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಕಿರ್ಣದಲ್ಲಿ ನಡೆಯಲಿದೆ.

ಈ ಬಾರಿ ಮಲಬಾರ್ ವಿಶ್ವರಂಗ ಪುರಸ್ಕಾರವನ್ನು ಹಿರಿಯ ರಂಗಕರ್ಮಿಗಳಾದ ಶ್ರೀನಿವಾಸ್ ಶೆಟ್ಟಿಗಾರ್, ಡಾ. ಮಾಧವಿ ಭಂಡಾರಿ, ಜಯರಾಮ್ ನೀಲಾವರ, ರಾಜಗೋಪಾಲ್ ಶೇಟ್ ಹಾಗೂ ಅಭಿಲಾಷಾ ಎಸ್. ಅವರಿಗೆ ಪ್ರದಾನ ಮಾಡಲಾಗುವುದು. ಸಮಾರಂಭದ ಸಭಾಧ್ಯಕ್ಷತೆಯನ್ನು ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಇಂದ್ರಾಳಿ ಜಯಕರ ಶೆಟ್ಟಿ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಮಣಿಪಾಲದ ಮಾಹೆಯ ಡಾ. ನೀತಾ ಇನಾಮ್ದಾರ್ ಹಾಗೂ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ರವಿ ಬಸ್ರೂರ್ ಭಾಗವಹಿಸಲಿದ್ದಾರೆ.

ಅಂದು ರಾತ್ರಿ 8 ಗಂಟೆಗೆ ಸಾಧನಾ ಸಂಸ್ಕೃತಿ ಅಭಿಯಾನ ಮಾಲಿಕೆಯಲ್ಲಿ ರಾಜೇಶ್ ಭಟ್ ಪಣಿಯಾಡಿ ಅವರ ಪರಿಕಲ್ಪನೆಯಲ್ಲಿ ಮೂಡಿಬರುತ್ತಿರುವ ಸಾಕ್ಷ್ಯಚಿತ್ರ ವನ್ನು Samskruthi Vishwa ಯೂಟ್ಯೂಬ್ನಲ್ಲಿ ವೀಕ್ಷಿಸಬಹುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.