ಅರ್ನಬ್‌ ಗೋಸ್ವಾಮಿ ಬಂಧನ: ಗೃಹ ಸಚಿವ ಅಮಿತ್‌ ಶಾ ಆಕ್ರೋಶ

ನವದೆಹಲಿ: ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ವಶಕ್ಕೆ ಪಡೆದಿರುವ ಮಹಾರಾಷ್ಟ್ರ ಪೊಲೀಸರ ಕ್ರಮದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಿಪಬ್ಲಿಕ್ ಟಿವಿ ಮತ್ತು ಅರ್ನಬ್ ಗೋಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವುದು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾತಂತ್ರದ ನಾಲ್ಕನೇ ಆಧಾರಸ್ತಂಭದ ಮೇಲೆ ನಡೆದ ದಾಳಿಯಾಗಿದೆ ಎಂದು ಅವರು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.