ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಥಮ ವಿಶೇಷ ಕಾರ್ಯಕಾರಿಣಿ ಸಭೆ ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ನಡೆಯಿತು.
ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷ ಗೀತಾ ವಿವೇಕಾನಂದ ಸಭೆಯನ್ನು ಉದ್ಘಾಟಿಸಿದರು. ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಶಾಸಕ ಲಾಲಾಜಿ ಮೆಂಡನ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ. ಸುವರ್ಣ, ಚಂದಮ್ಮ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಶೋಭಾ, ಮಹಿಳಾ ಮೋರ್ಚಾದ ಪ್ರಭಾರಿ ಗೀತಾಂಜಲಿ ಸುವರ್ಣ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆ ಸರೋಜ ಶೆಟ್ಟಿಗಾರ್.
ಕಾಪು ಮಹಿಳಾ ಮೋರ್ಚಾದ ಅಧ್ಯಕ್ಷೆ ಸುಮಾ ಶೆಟ್ಟಿ, ಗ್ರಾಮಾಂತರ ಮಹಿಳಾ ಮೋರ್ಚಾದ ಅಧ್ಯಕ್ಷೆ ವಸಂತಿ ಸತೀಶ್ ಪೂಜಾರಿ, ಕಾರ್ಕಳ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಬೈಂದೂರು ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾಗೀರಥಿ, ಕುಂದಾಪುರ ಮಹಿಳಾ ಮೋರ್ಚಾದ ಅಧ್ಯಕ್ಷೆ ರೂಪಾ ಪೈ, ಜಿಲ್ಲಾ ಬಿಜೆಪಿಯ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್, ಮಾಲತಿ ನಾಯಕ್, ಸುನೀತಾ ನಾಯಕ್ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ರಮಾ ಶೆಟ್ಟಿ, ಸೋನಾ ಪಾಯ್ದೆ , ರಜನಿ ಹೆಬ್ಬಾರ್ ,ವಿದ್ಯಾಪೈ , ಕೇಸರಿ ಕಾರ್ಯದರ್ಶಿಗಳಾದ ಅನಿತಾ ಆರ್ ಕೆ, ಪೂರ್ಣಿಮಾ ಶೆಟ್ಟಿ ರೇಣುಕಾ, ಜಿಲ್ಲಾ ಮಹಿಳಾ ಮೋರ್ಚಾ ಕೋಶಾಧಿಕಾರಿ ಮಾಯಾ ಕಾಮತ್ ಹಾಗೂ ಬಿಜೆಪಿ ವಿವಿಧ ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಪ್ರಮೀಳಾ ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ನೀರಜಾ ಶೆಟ್ಟಿ ವಂದಿಸಿದರು.