ಉಡುಪಿ: ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ನವೆಂಬರ್ 17 ರಿಂದ ಆರಂಭಿಸಲಾಗಿದ್ದು, 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ಪದವಿ/ ಸ್ನಾತಕೋತ್ತರ / ಡಿಪ್ಲೋಮಾ / ತಾಂತ್ರಿಕ/ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಡಿಸೆಂಬರ್ 10 ರ ವರೆಗೆ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಪ್ರಸಕ್ತ ವರ್ಷದ ಶುಲ್ಕ ಪಾವತಿ ರಶೀದಿಯೊಂದಿಗೆ, 2019-20 ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ಸಂಬಂಧಪಟ್ಟ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.