ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತೆ ಸಿಬಿಐ ಶಾಕ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಸಿಬಿಐ ಅಧಿಕಾರಿಗಳು ಮತ್ತೆ ಸಮನ್ಸ್ ನೀಡಿದ್ದಾರೆ. ನವೆಂಬರ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅಕ್ಟೋಬರ್ 5 ರಂದು ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಸಿಕ್ಕ ದಾಖಲೆಗಳ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸ್ತಿದ್ದಾರೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರಿ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎನ್ನಲಾಗುತ್ತಿದೆ.