ಬೆಂಗಳೂರು: ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರಿಕೆ ಸಹಕಾರಿ ಕ್ಷೇತ್ರದಲ್ಲಿನ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ಮೀನುಗಾರಿಕೆ ಇಲಾಖೆಯಿಂದ ನೀಡಲ್ಪಡುವ ರಾಜ್ಯದ ಅತ್ಯುತ್ತಮ ಮೀನುಗಾರರ ಸಹಕಾರಿ ಮಹಾಮಂಡಲ ಪ್ರಶಸ್ತಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಗೆ ಲಭಿಸಿದೆ.
ಇಂದು ಬೆಂಗಳೂರಿನ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಂದ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಎ. ಸುವರ್ಣ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ. ರಘುಪತಿ ಭಟ್, ಸೊರಬ ಶಾಸಕ ಕುಮಾರ್ ಬಂಗಾರಪ್ಪ ಹಾಗೂ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.