ಬೆಂಗಳೂರು: ಐಎಂಎ (ಐ ಮಾನಿಟರಿ ಅಡ್ವೈಸರಿ) ಸಮೂಹ ಕಂಪನಿಯ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಪ್ರಕರಣ ಸಂಬಂಧ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ವಿಚಾರಣೆಗೆ ಒಳಪಡಿಸಿದ್ದರು. ನಿರಂತರ ವಿಚಾರಣೆ ಬಳಿಕ ರೋಷನ್‍ರನ್ನು ವಶಕ್ಕೆ ಪಡೆದು, ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಂಗ ಬಂಧನದ ಆದೇಶದ ಬಳಿಕ ರೋಷನ್‍ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಯಿತು.