ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್‌ ವಿಧಿವಶ

ಗುರುಗ್ರಾಮ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್‌ (71) ಕೋವಿಡ್‌ನಿಂದ ಬುಧವಾರ ಬೆಳಿಗ್ಗೆ ನಿಧನ ಹೊಂದಿದರು.

ಕಳೆದ ಎರಡು ವಾರಗಳ ಹಿಂದೆ ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು. ಎರಡು ವಾರಗಳಿಂದ ಗುರುಗ್ರಾಮದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಐದಾರು ದಿನಗಳಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಬುಧವಾರ ಮುಂಜಾನೆ 3.30ರ ಸುಮಾರಿಗೆ ನಿಧನರಾದರು ಎಂದು ಅವರ ಪುತ್ರ ಫೈಸಲ್ ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ ಕುಟುಂಬಕ್ಕೆ ಅಹ್ಮದ್ ಪಟೇಲ್ ಆಪ್ತರಾಗಿದ್ದರು. ಕಾಂಗ್ರೆಸ್‌ನ ರಾಷ್ಟ್ರೀಯ ರಾಜಕಾರಣದಲ್ಲಿ ಟ್ರಬಲ್‌ ಶೂಟರ್‌ ಎಂದೇ ಅವರು ಖ್ಯಾತಿಯಾಗಿದ್ದರು.